ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿತ್ಯ ಬಳಕೆಯಲ್ಲಿ ನನ್ನ ಕನ್ನಡ: ಕರ್ನಾಟಕ ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮ ನ.27ಕ್ಕೆ

ನಿತ್ಯ ಬಳಕೆಯಲ್ಲಿ ನನ್ನ ಕನ್ನಡ: ಕರ್ನಾಟಕ ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮ ನ.27ಕ್ಕೆ



ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮಂಗಳೂರು ತಾಲೂಕು ಸಮಿತಿಯು ಸುರತ್ಕಲ್ಲಿನ ಗೋವಿಂದದಾಸ ಕಾಲೇಜ್ ಸಹಯೋಗದಲ್ಲಿ ಶನಿವಾರ ದಿನಾಂಕ 27 ರಂದು ಪೂರ್ವಾಹ್ನ 10ರಿಂದ ಕಾಲೇಜ್ ಸಭಾಂಗಣದಲ್ಲಿ 'ನಿತ್ಯ ಬಳಕೆಯಲ್ಲಿ ನನ್ನ ಕನ್ನಡ' ಎಂಬ ಚಿಂತನ ಮಂಥನ ಕಾರ್ಯಕ್ರಮ ಏರ್ಪಡಿಸಿದೆ.


ಮಂಗಳೂರು ವಿ. ವಿ. ಕುಲಪತಿಗಳಾದ ಡಾ. ಪಿ. ಎಸ್. ಎಡಪಡಿತ್ತಾಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಿಂದೂ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಇಡ್ಯ ಜನಾರ್ದನ ಅಧ್ಯಕ್ಷತೆ ವಹಿಸುವರು. ಕವಿ, ಸಾಹಿತಿ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ ಅವರು ವಿಷಯ ಪ್ರವೇಶ ಮಾಡಿ ಮಾತಾಡಲಿದ್ದಾರೆ.


ಅಭಾಸಾಪ ಜಿಲ್ಲಾ ಕಾರ್ಯದರ್ಶಿ ಪ್ರಕಾಶನಾರಾಯಣ ಚಾರ್ಮಾಡಿ, ಕಾಲೇಜ್ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ, ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ. ಮತ್ತು ಕನ್ನಡ ವಿಭಾಗ ಮುಖ್ಯಸ್ಥೆ ದೀಪಾ ಶೆಟ್ಟಿ ಉಪಸ್ಥಿತರಿರುವರು.


ಭಾಷೆಯ ಬಳಕೆ, ಉಪಯೋಗ ಮತ್ತು ಪ್ರಚಾರದ ನಿಟ್ಟಿನಲ್ಲಿ ನಮ್ಮ ನಮ್ಮ ವೈಯಕ್ತಿಕ ಪ್ರಯತ್ನದ ಬಗ್ಗೆ ಹದಿನೈದು ಮಂದಿ ಸಂಪನ್ಮೂಲ ವ್ಯಕ್ತಿಗಳು ಮಾತಾಡಲಿದ್ದು, ರತ್ನಾವತಿ ಜೆ. ಬೈಕಾಡಿ ಭಾವಗೀತೆಗಳನ್ನು ಹಾಡಲಿರುವರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post