ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘ ಅಳಿಕೆ ಗ್ರಾಮ ಪಂಚಾಯತ್ ಹಾಗೂ ಮಿತ್ತಳಿಕೆ ಕುಟುಂಬಸ್ಥರ ಸಹಭಾಗಿತ್ವದಲ್ಲಿ ವಿಟ್ಲ ಬಳಿಯ ಮಿತ್ತಳಿಕೆ ತಿಮಾರು ಗದ್ದೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಮಿತ್ತಳಿಕೆ ಕುಟುಂಬಸ್ಥರು, ಸ್ಥಳೀಯ ಗ್ರಾಮಸ್ಥರ ಸಹಯೋಗದೊಂದಿಗೆ ಪತ್ರಕರ್ತರು ನಾಟಿ ಮಾಡಿರುವ ಭತ್ತದ ಕಟಾವು ಕಾರ್ಯಕ್ರಮ ಹಾಗೂ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮ ಮಿತ್ತಳಿಕೆ ತಿಮಾರು ಗದ್ದೆಯಲ್ಲಿ ನವೆಂಬರ್ 13 ರಂದು ಬೆಳಿಗ್ಗೆ 8.30 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ ಖುಷಿಕೇಶ್ ಭಗವಾನ್ ಅವರು ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಬಂಟ್ವಾಳ. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ ಪೂಂಜಾಲಕಟ್ಟೆ, ಮಿತ್ತಳಿಕೆ ಕುಟುಂಬದ ಯಜಮಾನ ಮಿತ್ತಳಿಕೆ ಸಂಕಪ್ಪ ಶೇಖ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment