ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರು ಸೆರೆ

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರು ಸೆರೆ

 


ಮಂಗಳೂರು: ಕಾವೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸರಿಯಾದ ಮಾಹಿತಿ ಮೇರೆಗೆ ಪೊಲೀಸ್ ಅಧಿಕಾರಿಗಳ ತಂಡ ಶುಕ್ರವಾರ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಗಳನ್ನು ಕೃಷ್ಣಾಪುರ ನಿವಾಸಿ ಸನಾ ರಮ್ಲತ್ (46) ಮತ್ತು ಉಡುಪಿಯ ಉಳಿಯಾರಗೋಳಿ ನಿವಾಸಿ ಅಬ್ದುಲ್ ಹಫೀಜ್ (55) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಉಡುಪಿಯಿಂದ ಯುವತಿಯರನ್ನು ಕಳ್ಳಸಾಗಣೆ ಮಾಡಿ ಲೈಂಗಿಕ ದಾಸ್ಯಕ್ಕೆ ದೂಡುತ್ತಿದ್ದರು ಎನ್ನಲಾಗಿದೆ.

ಆರೋಪಿಗಳಿಂದ 10,060 ರೂ. ನಗದು, 3 ಮೊಬೈಲ್ ಫೋನ್, ಕಾರು ಸೇರಿದಂತೆ 3,25,560 ರೂಪಾಯಿ ಮೌಲ್ಯದ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

0 Comments

Post a Comment

Post a Comment (0)

Previous Post Next Post