ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಹಿರಿಯ ವಿದ್ವಾಂಸ, ಲೇಖಕ ಪ್ರೊ. ಕೆ.ಎಸ್ ನಾರಾಯಣಾಚಾರ್ಯ ವಿಧಿವಶ

ಹಿರಿಯ ವಿದ್ವಾಂಸ, ಲೇಖಕ ಪ್ರೊ. ಕೆ.ಎಸ್ ನಾರಾಯಣಾಚಾರ್ಯ ವಿಧಿವಶ

 


ಬೆಂಗಳೂರು: ಅಂಕಣಕಾರ ಲೇಖಕ ಹಿರಿಯ ವಿದ್ವಾಂಸ ಹಾಗೂ ಪಂಡಿತರಾಗಿದ್ದ ಪ್ರೊ. ಕೆ.ಎಸ್ ನಾರಾಯಣಾಚಾರ್ಯ ಇಹಲೋಕ ತ್ಯಜಿಸಿದ್ದಾರೆ. 88 ವರ್ಷಗಳ ಸುದೀರ್ಘ ಜೀವನ ಯಾನವನ್ನು ಮುಗಿಸಿದ ನಾರಾಯಣಾಚಾರ್ಯರು ಧರ್ಮಶಾಸ್ತ್ರ ಪ್ರಚಾರದ ಮೂಲಕ ಖ್ಯಾತಿಯನ್ನು ಗಳಿಸಿದ್ದರು. ಇಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.


ಭಾರತೀಯ ಸಂಸ್ಕೃತಿಯ ಪ್ರವಚನಕಾರ, ಪ್ರಚಾರಕರು ಹಾಗೂ ಕನ್ನಡ ಲೇಖಕರು ಆಗಿದ್ದ ಇವರು 1933ರಲ್ಲಿ ಕನಕಪುರದ ವೈದಿಕ ಶ್ರೀವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರಭಾವಿತರಾಗಿ ಪ್ರವಚನಗಳಿಂದ ಲೇಖನದೆಡೆಗೆ ಆಸಕ್ತಿ ತೋರಿದ್ದರು. ಇವರು ಮೈಸೂರು ವಿಶ್ವವಿದ್ಯಾನಿಲಯದಿಂದ 1954ರಲ್ಲಿ ಬಿಎಸ್ಸಿ , 1957 ಬಿಎ(ಆನರ್ಸ್), ಹಾಗೂ 1958ರಲ್ಲಿ ಎಂಎ(ಇಂಗ್ಲಿಷ್) ಪದವಿಗಳನ್ನು ಪಡೆದುಕೊಂಡಿದ್ದಾರೆ.


ಪ್ರೊ. ಕೆ.ಎಸ್ ನಾರಾಯಣಾಚಾರ್ಯ ಇವರಿಗೆ ವೇದಭೂಷಣ, ವಾಲ್ಮೀಕಿ ಹೃದಯಜ್ಞ, ವಿದ್ವನ್ಮಣಿ, ರಾಮಾಯಣಾಚಾರ್ಯ, ಮಹಾಭಾರತಾಚಾರ್ಯ ಮುಂತಾದ ಬಿರುದುಗಳು ಅನೇಕ ಮಠಾಧೀಶರಿಂದ ಲಭ್ಯವಾಗಿತ್ತು. ಕರ್ನಾಟಕ ಸರಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಕೂಡ ಇವರಿಗೆ ಲಭಿಸಿದೆ. ವೇದ ಸಂಸ್ಕೃತಿಯ ಪರಿಚಯ, ಶ್ರೀರಾಮಾವತಾರ ಸಂಪೂರ್ಣವಾದಾ, ಶ್ರೀರಾಮಾಯಣ ಪಾತ್ರ ಪ್ರಪಂಚ, ಶ್ರೀ ಮಹಾಭಾರತ ಪಾತ್ರ ಪ್ರಪಂಚ ಸೇರಿದಂತೆ ಅನೇಕ ಪುಸ್ತಕಗಳನ್ನು ಇವರು ಬರೆದಿದ್ದಾರೆ.


'ಪ್ರಖ್ಯಾತ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿ ಪ್ರೊ. ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ. ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಅವರು ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಟ್ವೀಟ್ ಮೂಲಕ ಇವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.


'ಖ್ಯಾತ ಚಿಂತಕರು, ಸುಪ್ರಸಿದ್ಧ ಲೇಖಕರು, ಮೇರು ವಿದ್ವಾಂಸರಾಗಿದ್ದ ಪ್ರೊ. ಕೆ.ಎಸ್ ನಾರಾಯಣಾಚಾರ್ಯರು ಇಂದು ಬೆಳಗಿನ ಜಾವ ನಿಧನರಾಗಿದ್ದು, ಅತೀವ ದುಃಖ ತಂದಿದೆ. ಅವರು ರಾಷ್ಟ್ರಭಕ್ತಿ, ಸಂಸ್ಕೃತಿಗಳ ಪರಮ ಆರಾಧಕರಾಗಿದ್ದರು. ಅವರ ನಿಧನವು ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ' ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post