ಮೈಸೂರು : ಟ್ರಾಫಿಕ್ ಎಎಸ್ ಐ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಗೌರಿ ಶಂಕರ ನಗರದಲ್ಲಿ ನಡೆದಿದೆ.
ವಿವಿಪುರಂ ಟ್ರಾಫಿಕ್ ಠಾಣೆಯ ಎಎಸ್ ಐ ಶಿವಕುಮಾರಸ್ವಾಮಿ(54) ವರ್ಷ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದಿಂದಾಗಿ ಎಎಸ್ ಐ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಕುರಿತು ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
إرسال تعليق