ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಟಿಟಿಡಿ ವಿಶೇಷ ಕರ್ತವ್ಯಾಧಿಕಾರಿ ಡಾಲರ್ ಶೇಷಾದ್ರಿ ನಿಧನ

ಟಿಟಿಡಿ ವಿಶೇಷ ಕರ್ತವ್ಯಾಧಿಕಾರಿ ಡಾಲರ್ ಶೇಷಾದ್ರಿ ನಿಧನ




ತಿರುಪತಿ: ತಿರುಪತಿ ದೇವಸ್ಥಾನದ ವಿಶೇಷ ಕರ್ತವ್ಯದ ಅಧಿಕಾರಿ ಡಾಲರ್ ಶೇಷಾದ್ರಿ (74) ಇಂದು ನಿಧನರಾಗಿದ್ದಾರೆ. ಬೆಳಿಗ್ಗೆ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಶಾಖಪಟ್ಟಣಂಗೆ ತೆರಳಿದ್ದ ಅವರಿಗೆ ಆಕಸ್ಮಿಕ ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಇವರು 1978ರಿಂದ ತಿರುಪತಿಯಲ್ಲಿ ತಿಮ್ಮಪ್ಪನ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. 2017ರಲ್ಲಿ ನಿವೃತ್ತರಾದ ಮೇಲೆ ಮುಖ್ಯ ಕರ್ತವ್ಯದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

0 تعليقات

إرسال تعليق

Post a Comment (0)

أحدث أقدم