ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಇಂದು ಪ್ರಧಾನಿಯನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ ಬೊಮ್ಮಾಯಿ

ಇಂದು ಪ್ರಧಾನಿಯನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ ಬೊಮ್ಮಾಯಿ

 


ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.


ಮಾಧ್ಯಮದ ಜೊತೆಗೆ ಮಾತನಾಡಿದ ಸಿಎಂ ಅವರು, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ಮಾಡುತ್ತೇನೆ. ಹಾಗೆಯೇ ಪ್ರಧಾನಿ ಅವರನ್ನು ಭೇಟಿಯಾಗಿ ಬಹಳ ದಿನಗಳಾಗಿದ್ದವು ಹೀಗಾಗಿ ಅವರ ಭೇಟಿಗೆ ಸಮಯ ಕೇಳಿದ್ದೆ ಎಂದು ಹೇಳಿದ್ದಾರೆ.

ಹಾಗೆಯೇ ಇಂದಿನ ಭೇಟಿ ವೇಳೆ ಹಾನಗಲ್ ಉಪಚುನಾವಣೆ ಸೋಲು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

0 Comments

Post a Comment

Post a Comment (0)

Previous Post Next Post