ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುನೀತ್ ನಿಧನದ ಹಿನ್ನೆಲೆ ಜಿಮ್ ಗಳಿಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ

ಪುನೀತ್ ನಿಧನದ ಹಿನ್ನೆಲೆ ಜಿಮ್ ಗಳಿಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ

 


ಚಿಕ್ಕಬಳ್ಳಾಪುರ: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಕಾರಣ ಜಿಮ್ ಗಳಿಗೆ ಮಾರ್ಗಸೂಚಿ ತರುವ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರವೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖ್ಯಾತ ಹೃದಯ ತಜ್ಞರಿಂದ ಜಿಮ್ ಮತ್ತು ಫಿಟ್ನೆಸ್ ಸೆಂಟರ್ ಗಳಲ್ಲಿ ಮಾರ್ಗಸೂಚಿ ತರುವ ಕುರಿತು ಚರ್ಚೆ ನಡೆದಿದ್ದು, ಶೀಘ್ರವೇ ಗೈಡ್ ಲೈನ್ಸ್ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.


ಒಂದೆರಡು ಸನ್ನಿವೇಶಗಳನ್ನು ಆಧರಿಸಿ ಜಿಮ್ ಮಾಡುವುದೇ ತಪ್ಪು ಎಂದು ಹೇಳುವುದು ಸರಿಯಲ್ಲ. ಹೀಗಾಗಿ ಮಾರ್ಗಸೂಚಿ ತರಲು ಚಿಂತನೆ ನಡೆದಿದೆ.

ಖ್ಯಾತ ಹೃದಯ ತಜ್ಞರಾದ ಡಾ.ಸಿ.ಎನ್. ಮಂಜುನಾಥ್, ಡಾ. ವಿವೇಕ್ ಚೌಳಿ, ಡಾ. ದೇವಿಶೆಟ್ಟಿ, ಅಮೆರಿಕದ ರಂಗಧಾಮ್ ಅವರ ಬಳಿ ಚರ್ಚೆ ನಡೆಸಲಾಗಿದ್ದು, ಶೀಘ್ರವೇ ಮಾರ್ಗಸೂಚಿ ತರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم