ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕ್ಯಾಬ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಕ್ಯಾಬ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

 


ಬೆಂಗಳೂರು - ಕ್ಯಾಬ್ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಚಂದ್ರಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೂಲತಃ ತುರುವೇಕೆರೆಯ ಮಂಜುನಾಥ್ (36)ವರ್ಷ ಆತ್ಮಹತ್ಯೆ ಮಾಡಿಕೊಂಡಿರುವ ಕ್ಯಾಬ್ ಚಾಲಕ.

ಚಂದ್ರಲೇಔಟ್‍ನ ಮೊದಲನೆ ಹಂತದಲ್ಲಿ ಪತ್ನಿ ಜೊತೆ ಮಂಜುನಾಥ್ ವಾಸವಾಗಿದ್ದರು.

ಇಂದು ಬೆಳಗ್ಗೆ ಮಂಜುನಾಥ್ ಪತ್ನಿ ಅಂಗಡಿಗೆ ಹೋಗಿದ್ದಾಗ ಬೆಳಗ್ಗೆ 9 ಗಂಟೆಯಿಂದ 10 ಗಂಟೆ ಮಧ್ಯೆ ಪತ್ನಿ ವಾಪಸ್ ಬರುವಷ್ಟರಲ್ಲಿ ಕಿಟಕಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾಲ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸುದ್ದಿ ತಿಳಿದ ತಕ್ಷಣ ಚಂದ್ರಲೇಔಟ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم