ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸೆಲ್ಫಿ ತೆಗೆಯಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು

ಸೆಲ್ಫಿ ತೆಗೆಯಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದ ಇಬ್ಬರು ವಿದ್ಯಾರ್ಥಿಗಳು

 


ಮೈಸೂರು: ಸೆಲ್ಫಿ ತೆಗೆಯುವ ಚಟದಿಂದ ಇಬ್ಬರು ಪ್ರಾಣ ಕಳೆದುಕೊಂಡ ಘಟನೆಯೊಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೆಂಚನ ಕೆರೆಯಲ್ಲಿ ಈ ದುರಂತ ಸಂಭವಿಸಿದೆ.

ಅಬ್ದುಲ್ಲಾ  (21 ವರ್ಷ) ಹಾಗೂ ತನ್ವೀರ್ (20 ವರ್ಷ) ಎಂಬ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿ ಮೃತಪಟ್ಟಿದ್ದಾರೆ. ಜೊತೆಗಿದ್ದ ಇನ್ನೊಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕೆರೆ ಏರಿ ಮೇಲೆ ಈ ಮೂವರು ಗೆಳೆಯರು ಸೆಲ್ಫಿ ತೆಗೆದುಕೊಳ್ಳಲು ನಿಂತಿದ್ದು, ಸೆಲ್ಫಿ ಕ್ಲಿಕ್ಕಿಸುವ ವೇಳೆಗೆ ಅಬ್ದುಲ್ಲಾ ಹಾಗೂ ತನ್ವೀರ್ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ.

ಸೆಲ್ಫಿ ತೆಗೆಯುತ್ತಿದ್ದವ ಪಾರಾಗಿದ್ದಾನೆ. ಶವಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

author dissertation

0 Comments

Post a Comment

Post a Comment (0)

Previous Post Next Post