ಉಡುಪಿ: ಕವಿ ಮುದ್ದಣ ಮಾರ್ಗ ಇಲ್ಲಿಯ, ಶ್ರೀಜಗದ್ಗುರು ನಿತ್ಯಾನಂದ ಸ್ವಾಮೀಜಿ ಮಂದಿರ- ಮಠದಲ್ಲಿ 60 ನೇ ವಾರ್ಷಿಕೋತ್ಸವ ಮತ್ತು ಭಜನಾ ಕಾರ್ಯಕ್ರಮವು ಇಂದು (ನ.24) ನಡೆಯಲಿದೆ.
ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಊರ ಪರವೂರ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಬಾಲಭೋಜನ, ಅನ್ನಸಂತರ್ಪಣೆ, ಸಂಜೆ 4-30ಕ್ಕೆ ಮಂದಿರದ ಆವರಣದಲ್ಲಿ ಪಲ್ಲಕ್ಕಿ ಉತ್ಸವ, ರಾತ್ರಿ 8 ಗಂಟೆಗೆ ಮಹಾಪೂಜೆ ಜರುಗಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷರಾದ ಎರ್ಮಾಳ್ ಶಶಿಧರ್ ಕೆ. ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿರುವರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق