ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಾರಿಗೆ ಸಮಸ್ಯೆ ಕುರಿತ ಸಾರ್ವಜನಿಕ ದೂರುಗಳಿಗೆ ಶೀಘ್ರ ಪರಿಹಾರ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾಮ್

ಸಾರಿಗೆ ಸಮಸ್ಯೆ ಕುರಿತ ಸಾರ್ವಜನಿಕ ದೂರುಗಳಿಗೆ ಶೀಘ್ರ ಪರಿಹಾರ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾಮ್



ಉಡುಪಿ: ಜಿಲ್ಲಾ ಸಾರಿಗೆ ಪ್ರಾಧಿಕಾರಕ್ಕೆ ಸಲ್ಲಿಸುವ ಸಾರ್ವಜನಿಕರ ದೂರುಗಳ ಕುರಿತಂತೆ ಶೀಘ್ರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.


ಅವರು ಇಂದು ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸಭೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುಧೀರ್ ಕಾಂಚನ್ ಶಿರಿಯಾರ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಸರ್ಕಾರಿ ಬಸ್ ಗಳನ್ನು ಓಡಿಸಬೇಕು, ಹಳ್ಳಿಗಳಿಗೆ ಸಂಚರಿಸಲು ಪರವಾನಗಿ ಪಡೆದು, ಸಂಚರಿಸಿದೇ ಇರುವ ಖಾಸಗಿ ಬಸ್ ಗಳ ಪರವಾನಗಿ ರದ್ದುಗೊಳಿಸಬೇಕು, ಖಾಸಗಿ ಬಸ್ ಗಳಲ್ಲಿ ಹಿರಿಯ ನಾಗರೀಕರಿಗೆ ರಿಯಾಯತಿ ದರ ನೀಡಬೇಕು, ಪರವಾನಗಿ ಇಲ್ಲದೇ ಸಂಚರಿಸುತ್ತಿರುವ ಬಸ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು.


ಕರ್ನಾಟಕ ಪ್ರಾಂತ್ಯ ರೈತ ಸಂಘದ ಶಶಿಧರ್ ಮಾತನಾಡಿ, ಬಸ್ ಗಳಲ್ಲಿ ದರ ಹೆಚ್ಚಳ ಹಿಂಪಡೆಯಬೇಕು, ಮಣಿಪಾಲ-ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಸೇವೆಯನ್ನು ಪುನರಾರಂಭಿಸಬೇಕು, ಸರ್ಕಾರಿ ಬಸ್ ಗಳ ರೂಟ್ ಸಂಖ್ಯೆಯನ್ನು ಹೆಚ್ಚಿಸಬೇಕು, ಖಾಸಗಿ ಬಸ್ ಗಳಲ್ಲಿ ಹಿರಿಯ ನಾಗರೀಕರಿಗೆ ನಿಗಧಿತ ಸೀಟುಗಳನ್ನು ಬಿಟ್ಟು ಕೊಡುವ ಕುರಿತಂತೆ ಮನವಿ ಮಾಡಿದರು.


ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ್, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಹಾಗೂ ಖಾಸಗಿ ಬಸ್ ಗಳ ಮಾಲೀಕರು ಮತ್ತಿತರರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post