ವಿವಾಹಿತ ವ್ಯಕ್ತಿ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಮೂಡುತೋನ್ಸೆ ಗ್ರಾಮದ, ಮೂಡಬೆಟ್ಟು ನಿಡಂಬಳ್ಳಿ ನಿವಾಸಿ ಮಹಮ್ಮದ್ ನದೀಮ್ (23) ಎಂಬುವವರು ಅಕ್ಟೋಬರ್ 07 ರಂದು ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.
ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು, ಹಿಂದಿ ಭಾಷೆಯನ್ನು ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂರವಾಣಿ ಸಂಖ್ಯೆ 0820-253799, 9480805447 ಅನ್ನು ಸಂಪರ್ಕಿಸುವಂತೆ ಮಲ್ಪೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯಕ್ತಿ ನಾಪತ್ತೆ
ಉಡುಪಿ: ದಾನಶಾಲೆಯ ವರ್ಧಮಾನ ಲಾಡ್ಜ್‌ನಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ದಿನೇಶ (57) ಎಂಬುವವರು ಅಕ್ಟೋಬರ್ 29ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 8 ಇಂಚು ಎತ್ತರವಿದ್ದು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ. ಸಂಖ್ಯೆ: 08258-231082, 9480805435 ಅಥವಾ ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, 9480805461 ಗೆ ಮಾಹಿತಿ ನೀಡುವಂತೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق