ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರಿ ಮಳೆಯ ಹಿನ್ನೆಲೆ ಕೆಲ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆ ಕೆಲ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

 


ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ,ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವ ಕಾರಣ ಎಲ್ಲಾ ಶಾಲೆಗಳಿಗೆ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.


ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ. ವಿಶಾಲ್ ಆರ್. ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸುವ ಕುರಿತು ಸೂಚನೆ ನೀಡಿದ್ದಾರೆ.


ರಾಜಾ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿಪಡಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡಲು ಸೂಚನೆ ನೀಡಲಾಗಿದೆ.


0 Comments

Post a Comment

Post a Comment (0)

Previous Post Next Post