ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ ಮಹಿಳೆ ಸಾವು ಹಲವರಿಗೆ ಗಾಯ

ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ ಮಹಿಳೆ ಸಾವು ಹಲವರಿಗೆ ಗಾಯ

 


ರಾಯಚೂರು: ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿಯಾದ ಕಾರಣ ಮಹಿಳೆಯೊಬ್ಬರು ಮೃತಪಟ್ಟ ಘಟನೆಯೊಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.


ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನು ಕ್ರೂಸರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು.

ಈ ವೇಳೆ ಕ್ರೂಸರ್ ಟೈಯರ್ ಬ್ಲಾಸ್ ಆಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ.


ವಾಹನ ಪಲ್ಟಿ ಹೊಡೆದು ಬಿದ್ದಿದ್ದರಿಂದ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


0 تعليقات

إرسال تعليق

Post a Comment (0)

أحدث أقدم