ಉಡುಪಿ: ಪಡಿತರ ವ್ಯವಸ್ಥೆಯಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಸ್ಥಳೀಯ ಕುಚ್ಚಲಕ್ಕಿ ವಿತರಣೆಗೆ ಕೇಂದ್ರ ಸರಕಾರ ಅವಕಾಶ ನೀಡಿದೆ. ಆದರೂ ಕೂಡ ಇದರ ಪೂರೈಕೆಯಲ್ಲಿ ಕೊರತೆ ಹಾಗೂ ವಿತರಣೆಗೆ ಅನೇಕ ತಾಂತ್ರಿಕ ಸಮಸ್ಯೆಗಳಿರುವುದರಿಂದ ಪಡಿತರ ವ್ಯವಸ್ಥೆಯಲ್ಲಿ ಇದರ ಪೂರೈಕೆ ಸದ್ಯಕ್ಕೆ ಅಸಾಧ್ಯ.ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ತಲಾ 40 ಸಾವಿರ ಕ್ವಿಂಟಾಲ್ ಅಕ್ಕಿ ಬೇಕು.
ಇತ್ತೀಚೆಗೆ ಇದರಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದವು. ಇದರ ವಿತರಣೆಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದ್ದು ಪರಿಶೀಲನೆಯ ಹಂತದಲ್ಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Post a Comment