ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 MRPL ಇಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ಕಳೆದುಕೊಂಡ 57 ಕಾರ್ಮಿಕರ ಬೆಂಬಲಕ್ಕೆ ನಿಂತ ಶಾಸಕ ಡಾ.ಭರತ್ ಶೆಟ್ಟಿ

MRPL ಇಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ಕಳೆದುಕೊಂಡ 57 ಕಾರ್ಮಿಕರ ಬೆಂಬಲಕ್ಕೆ ನಿಂತ ಶಾಸಕ ಡಾ.ಭರತ್ ಶೆಟ್ಟಿ

ಸಮಸ್ಯೆ ಶೀಘ್ರ ಇತ್ಯರ್ಥಕ್ಕೆ ಅಧಿಕಾರಿಗಳೊಂದಿಗೆ ಮಾತುಕತೆ


ಸುರತ್ಕಲ್‌: ಇಲೆಕ್ಟ್ರಿಕಲ್ ವಿಭಾಗದ ಟೆಂಡರ್ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸದಿರುವ ಕಾರಣ MRPL ಹಂತ 3ರ ಸುಮಾರು 57 ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಈ ಬಗ್ಗೆ 57 ಕಾರ್ಮಿಕರ ಹಾಗೂ ಅವರ ಕುಟುಂಬದ ಬದುಕನ್ನು ಕೇವಲವಾಗಿ ಪರಿಗಣಿಸಿ ಬೇಜವಾಬ್ದಾರಿಯುತ ನಡೆಯನ್ನು ಪ್ರದರ್ಶಿಸಿರುವ ಇಲೆಕ್ಟ್ರಿಕಲ್ ವಿಭಾಗ ಹಾಗೂ ಆಡಳಿತ ಮಂಡಳಿಯ ಅಧಿಕಾರಿಗಳ ವಿರುದ್ಧ MRPL-ONGC ಕರ್ಮಚಾರಿ ಸಂಘದ ನೇತೃತ್ವದಲ್ಲಿ ಕಾರ್ಮಿಕರು MRPL ಕಾರ್ಗೋಗೇಟ್ ಮುಂದೆ ಉಪವಾಸ ಸತ್ಯಾಗ್ರಹದಲ್ಲಿ ಕುಳಿತುಕೊಂಡಿದ್ದಾರೆ. ಈ ವಿಷಯವನ್ನು MRPL ಆಡಳಿತ ಮಂಡಳಿಯ ಗಮನಕ್ಕೆ ತರಲಾಗಿದೆ.

ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ ಆಗಬಹುದಾದ ಅನಾಹುತಕ್ಕೆ ಇಲೆಕ್ಟ್ರಿಕಲ್ ವಿಭಾಗದ ಅಧಿಕಾರಿಗಳೇ ಕಾರಣರಾಗಿರುತ್ತಾರೆ ಎಂದು ಯೂನಿಯನ್ ಪದಾಧಿಕಾರಿಗಳು ಆಗ್ರಹಿಸಿದರು.


ಇವರಿಗೆ ಬೆಂಬಲವಾಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ‌ ಸ್ಥಳೀಯ ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ ಮತ್ತು ಲಕ್ಷ್ಮಿಶೇಖರ್ ದೇವಾಡಿಗ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ನೈತಿಕ ಬೆಂಬಲ ಸೂಚಿಸಿ, ಆಡಳಿತ ಮಂಡಳಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ತುರ್ತಾಗಿ ಸಮಸ್ಯೆ ಬಗೆಹರಿಸಲು ಸೂಚಿಸಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post