ಬಂಟ್ವಾಳ: ಟೈಲರ್ ವೃತ್ತಿಗೆಂದು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದು, ಇದೀಗ ವ್ಯಕ್ತಿಯ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ.
ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ ನಡೆಸುತ್ತಿದ್ದು, ಇತ್ತೀಚೆಗೆ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ನ.25 ರಂದು ಬೆಳಿಗ್ಗೆ ಮನೆಯಿಂದ ಹೊರಟು ಹೋದವರು ಮನೆಗೆ ಬರದೆ ನಾಪತ್ತೆಯಾಗಿದ್ದರು ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದೀಗ ನೇತ್ರಾವತಿ ನದಿಯಲ್ಲಿ ಶವ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.
Post a Comment