ವಿಜಯಪುರ: ಕೊರೊನಾ ಮೂರನೇ ಅಲೆ ಭೀತಿಯ ಕಾರಣದಿಂದ ಮುಂಜಾಗೃತಾ ಕ್ರಮವಾಗಿ 2021-22ನೇ ಸಾಲಿನ ಯುವಜನೋತ್ಸವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ 2021-22 ನೇ ಸಾಲಿನ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆದರೆ ಕೊರೊನಾ 3 ನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದ ಮೇರೆಗೆ ಯುವಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.
Post a Comment