ಶಿವಮೊಗ್ಗ: 1.10 ಲಕ್ಷ ರೂ ಮೌಲ್ಯದ ಚಿನ್ನದ ಕನ್ನಡಕಕ್ಕೆ ಹಾನಿಯಾಗಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಭದ್ರಪ್ಪ ಪೂಜಾರ್ ಶಿರಾಳಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಂಚಿಕೊಪ್ಪ ಗ್ರಾಮದಲ್ಲಿ ಚಿಕ್ಕಪ್ಪನ ಮಗ ತೀರಿಕೊಂಡಿದ್ದರಿಂದ ಅಂತ್ಯಸಂಸ್ಕಾರದಲ್ಲಿ ವೀರಭದ್ರಪ್ಪ ಪೂಜಾರ್ ಭಾಗಿಯಾಗಿದ್ದಾರೆ.
ಈ ವೇಳೆ ಅವರ ಅಣ್ಣನ ಮಗ ಮಂಜುನಾಥ ಹಳೆಯ ದ್ವೇಷದಿಂದ ಗಲಾಟೆ ಮಾಡಿ ಹಲ್ಲೆ ಮಾಡಿದ್ದಾನೆನ್ನಲಾಗಿದೆ.
ವೀರಭದ್ರಪ್ಪ ಪೂಜಾ ಅವರ ಕಿವಿ ಬದಿಗೆ ಪೆಟ್ಟುಬಿದ್ದು ಪ್ರಜ್ಞೆ ತಪ್ಪಿದ್ದಾರೆ. ಅವರನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, ಎಚ್ಚರವಾದ ಸಂದರ್ಭದಲ್ಲಿ 1.10 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕನ್ನಡಕಕ್ಕೆ ಹಾನಿಯಾಗಿದೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment