ಚಿತ್ರದುರ್ಗ - ಕುರಿಗಳ ಮೇಲೆ ಲಾರಿ ಹರಿದು ಕುರಿಗಾಯಿ ಸೇರಿದಂತೆ 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ಹೊಳಲ್ಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-13ರ ಕಣಿವೆ ಬಳಿ ನಡೆದಿದೆ.
ಹಿರಿಯೂರು ತಾಲೂಕು ಬೆನಕನಹಳ್ಳಿ ಗ್ರಾಮದ ಮೂಡ್ಲಪ್ಪ (50) ಸಾವಿಗೀಡಾದ ದುರ್ದೈವಿ.
ಕುರಿ ಮೇಯಿಸಿಕೊಂಡು ಕುರಿಹಟ್ಟಿಗೆ ಸೇರಿಸಲು ರಾತ್ರಿ ಕುರಿಗಳನ್ನು ಹೊಡೆದುಕೊಂಡು ಹೋಗುತ್ತಿದ್ದ ವೇಳೆ ಕಣಿವೆಯ ತಿರುವಿನಲ್ಲಿ ಚಾಲಕ ಲಾರಿಯನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಏಕಾಏಕಿ ಕುರಿಹಿಂಡಿನ ಮೇಲೆ ಹರಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಪಿಎಸ್‍ಐ ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ಬಗ್ಗೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
إرسال تعليق