ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಎಎಸ್ಐ ಹೃದಯಾಘಾತದಿಂದ ನಿಧನ

ಎಎಸ್ಐ ಹೃದಯಾಘಾತದಿಂದ ನಿಧನ

 


ಚಿತ್ರದುರ್ಗ: ತಾಲ್ಲೂಕಿನ ಐಮಂಗಲ ಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ನಿರತ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಗೋಕರ್ಣ ಪೋಲಿಸ್ ಠಾಣೆಯ ಎಎಸ್‌ಐ ಗಣೇಶ್ ಕೃಷ್ಣ ಗೌಡ (55) ಮೃತಪಟ್ಟವರು.

ಪೋಲಿಸ್ ತರಬೇತಿ ಶಾಲೆಯಲ್ಲಿ ಸುಮಾರು 370 ಎಎಸ್‌ಐಗಳಿಗೆ ಒಂದು ತಿಂಗಳ ಪುನರ್ ಮನನ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಇದರಲ್ಲಿ ಭಾಗಿಯಾಗಿದ್ದ ಗಣೇಶ್ ಕೃಷ್ಣ ಗೌಡ ಅವರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡಿದೆ.

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸಿದೇ ಅವರು ಮೃತಪಟ್ಟಿದ್ದಾರೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.


0 Comments

Post a Comment

Post a Comment (0)

Previous Post Next Post