ನವದೆಹಲಿ : ಇಂದು ಬೆಳಗ್ಗಿನ ಜಾವ ಹರಿಯಾಣದ ಅಂಬಾಲಾ-ದೆಹಲಿ ಹೆದ್ದಾರಿಯಲ್ಲಿ ಎರಡು ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಬಸ್ ದೆಹಲಿಯ ಕಡೆಗೆ ಹೋಗುತ್ತಿದ್ದಾಗ ಮತ್ತೊಂದು ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment