ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ, ಪ್ರಯಾಣಿಕರು ಪಾರು

ಕಾರ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ, ಪ್ರಯಾಣಿಕರು ಪಾರು



ಬೆಳ್ತಂಗಡಿ:  ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರೆಲ್ಲರೂ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ನಿಡ್ಲೆ ಸಮೀಪ ಕಳೆದ ರಾತ್ರಿ ಸಂಭವಿಸಿರುವುದು ವರದಿಯಾಗಿದೆ.

ಸುಗಮ ಹೆಸರಿನ ಖಾಸಗಿ ಬಸ್ ಕಾರ್ಕಳದಿಂದ ರಾತ್ರಿ ಬೆಂಗಳೂರಿಗೆ ಹೊರಟಿತ್ತು.

ಬಸ್ ನಿಡ್ಲೆ ಬಳಿ ತಲುಪಿದಾಗ ಬಸ್ಸಿನ ಮುಂಭಾಗದಲ್ಲಿರುವ ಇಂಜಿನ್ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ಸನ್ನು ನಿಲ್ಲಿಸಿದ್ದು, ಪ್ರಯಾಣಿಕರನ್ನೆಲ್ಲ ಕೂಡಲೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ.

ಈ ವೇಳೆ ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಲು ಸಹಕರಿಸಿದ್ದಾರೆ. ಅಷ್ಟರಲ್ಲಿ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಾ ಆಗಮಿಸಿದ್ದು, ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.


ಬಸ್ಸಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಚಾಲಕ ಆರಂಭದಲ್ಲೇ ಗುರುತಿಸಿ ಬಸ್ಸನ್ನು ನಿಲ್ಲಿಸಿದ್ದರಿಂದ ಯಾವುದೇ ಹೆಚ್ಚಿನ ಅಪಾಯವಿಲ್ಲದೆ ಬೆಂಕಿ ನಂದಿಸಲು ಸಾಧ್ಯವಾಗಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم