ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬ್ಯೂಟಿಷಿಯನ್ ಹಾಗೂ ಟೈಲರಿಂಗ್ ಉಚಿತ ತರಬೇತಿ ಗೆ ಅರ್ಜಿ ಅಹ್ವಾನ

ಬ್ಯೂಟಿಷಿಯನ್ ಹಾಗೂ ಟೈಲರಿಂಗ್ ಉಚಿತ ತರಬೇತಿ ಗೆ ಅರ್ಜಿ ಅಹ್ವಾನ

 


ಬೆಂಗಳೂರು: ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 27/12/2021 ರಿಂದ 30 ದಿನಗಳ 'ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್' ಮತ್ತು 30/12/2021 ರಿಂದ 30 ದಿನಗಳ 'ಮಹಿಳೆಯರ ಟೈಲರಿಂಗ್' ಕುರಿತು ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ಪ್ರಯೋಗಿಕವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವತಿಯರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.


ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ದಿನಾಂಕ 25.12.2021ರೊಳಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, (CBRSETI), ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ - 576104 ಇಲ್ಲಿಗೆ ಕಳುಹಿಸುವುದು


ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ.

ಆಸಕ್ತಿ ಇರುವ ಕ್ಷೇತ್ರಕ್ಕೆ ಅರ್ಜಿಯನ್ನು ಕಳುಹಿಸುವುದು. ದೂರವಾಣಿ ಮುಖಾಂತರವೂ ತರಬೇತಿಗೆ ನೋದಾಯಿಸಿಕೊಳ್ಳಬಹುದು.

ಗ್ರ್ರಾಮೀಣ ಪ್ರದೇಶದ ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.

ಸಂಸ್ಥೆಯ ದೂರವಾಣಿ ಸಂಖ್ಯೆ: 0820-2570455, 9449862665 ಗಳನ್ನು ಸಂಪರ್ಕಿಸಬಹುದಾಗಿದೆ.


0 Comments

Post a Comment

Post a Comment (0)

Previous Post Next Post