ದಾವಣಗೆರೆ: ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ, ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 101 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರು 18 ರಿಂದ 35 ವರ್ಷದೊಳಗಿನ ವಯೋಮಾನದವರಾಗಿರಬೇಕು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದೊಳಗಿನ ವಯೋಮಾನದವರಾಗಿರಬೇಕು. ವಿಕಲಚೇತನ ವರ್ಗಕ್ಕೆ ಸಂಬಂಧಿಸಿದಂತೆ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ ತೇರ್ಗಡೆಯಾಗಿರಬೇಕು.
ಅರ್ಜಿ ಸಲ್ಲಿಸುವವರು 2022 ರ ಜನವರಿ 18 ರ ಸಂಜೆ 5.30 ಗಂಟೆಯೊಳಗೆ ಆನ್‍ಲೈನ್ http://davanagere.nic.in/ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದೂ.ಸಂ: 08192-264056ನ್ನು ಸಂಪರ್ಕಿಸಬಹುದೆಂದು ಉಪನಿರ್ದೇಶಕರಾದ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق