ದೆಹಲಿ: ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಕಂಟೇನರ್ ಟ್ರಕ್ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಸಂಭವಿಸಿದೆ.
ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಮೃತಪಟ್ಟಿದ್ದಾರೆ. ಟ್ರಕ್ ಚಲಾಯಿಸುತ್ತಿದ್ದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳೀಯ ಠಾಣೆ ಪೊಲೀಸರು ಸ್ಥಳಕ್ಕೆ ಬಂದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪರಾರಿಯಾಗಿರುವ ಟ್ರಕ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق