ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆಯೊಂದು ತುಂಬೆ ಎಂಬಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ನಡೆದಿದೆ.
ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿಸಿದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಸಂದರ್ಭದಲ್ಲಿ ತುಂಬೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಈ ಅವಘಡದಿಂದ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
إرسال تعليق