ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 5 ತಿಂಗಳಲ್ಲಿ 60 ಕೋಟಿ ಮೌಲ್ಯದ ಡ್ರಗ್ಸ್ ವಶ: ಬೆಂಗಳೂರು ಪೊಲೀಸರ ಕಾರ್ಯಾಚರಣೆ

5 ತಿಂಗಳಲ್ಲಿ 60 ಕೋಟಿ ಮೌಲ್ಯದ ಡ್ರಗ್ಸ್ ವಶ: ಬೆಂಗಳೂರು ಪೊಲೀಸರ ಕಾರ್ಯಾಚರಣೆ


ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಅನೇಕ ಕಾರ್ಯಾಚರಣೆಗಳು ದಿನವಿಡೀ ನಡೆಯುತ್ತಿರುತ್ತದೆ. ಈ ವ್ಯಸನದ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು 5 ತಿಂಗಳಲ್ಲಿ 60 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಇದರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ನಗರ ಪೊಲೀಸರು ಮಾದಕ ವಸ್ತು ಸಾಗಾಟ ಹಾಗೂ ಅದರ ಮಾರಾಟದ ವಿರುದ್ಧ 3800 ಪ್ರಕರಣ ದಾಖಲಿಸಿಕೊಂಡು ಸುಮಾರು 60 ಕೋಟಿ ರೂ. ಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಸ್ವಿಗ್ಗಿ, ಝೊಮ್ಯಾಟೋ ಹಾಗೂ ಕೊರಿಯರ್ ಸೇವೆಯಲ್ಲಿ ಮಾದಕ ವಸ್ತುಗಳನ್ನು ಆರ್ಡರ್ ಮಾಡಿದವರ ಮನೆಗೆ ತಲುಪಿಸಲಾಗುತ್ತದೆ. ಅಷ್ಟೇ ಅಲ್ಲದೆ ಇನ್ನೂ ಕೆಲವರು ಪುಸ್ತಕಗಳಲ್ಲೂ ಮಾದಕ ವಸ್ತುಗಳನ್ನಿಟ್ಟು ಸರಬರಾಜು ಮಾಡಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

0 تعليقات

إرسال تعليق

Post a Comment (0)

أحدث أقدم