ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೊಲೆರೋ ಪಿಕಪ್ ಮತ್ತು ಬೈಕ್ ಅಪಘಾತ; ಇಬ್ಬರು ಸಾವು

ಬೊಲೆರೋ ಪಿಕಪ್ ಮತ್ತು ಬೈಕ್ ಅಪಘಾತ; ಇಬ್ಬರು ಸಾವು

 


ಚಿಕ್ಕಮಗಳೂರು : ಬೊಲೆರೋ ಪಿಕಪ್ ಹಾಗೂ ಬೈಕ್ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಒಬ್ಬ ಗಂಭೀರ ಗಾಯಗೊಂಡ ಘಟನೆಯೊಂದು ಬುಧವಾರ ಸಂಜೆ ಸಂಭವಿಸಿದೆ.

ಚಿಕ್ಕಮಗಳೂರು ತಾಲೂಕಿನ ದೇವರಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡವನನ್ನು ಸ್ಥಳೀಯ ಆಸ್ಪತೆಗೆ ದಾಖಲಿಸಲಾಗಿದೆ.

ಮೃತರನ್ನು ಹಾಸನ ಜಿಲ್ಲೆ ಅರಸೀಕೆರೆ ಮೂಲದವರು ಎನ್ನಲಾಗಿದ್ದು, ಚಿಕ್ಕಮಗಳೂರಿನಲ್ಲಿ ಕೆಲಸ ಮುಗಿಸಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم