ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ



ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇಂದು 56 ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಸಲ್ಮಾನ್ ತನ್ನ ಮುಂದಿನ ಹೊಸ ಚಿತ್ರವನ್ನು ಘೋಷಿಸಿದ್ದಾರೆ. 

'ಭಜರಂಗಿ ಭಾಯ್ ಜಾನ್' ಮುಂದಿನ ಭಾಗ 'ಪವನಪುತ್ರ ಭಾಯಿಜಾನ್' ಸಿನಿಮಾದಲ್ಲಿ ನಟಿಸುವುದಾಗಿ ಅವರು ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೆ ಬರಹಗಾರ ವಿಜಯೇಂದ್ರ ಪ್ರಸಾದ್ ಅವರೊಂದಿಗೆ ಕೆಲಸ ಮಾಡಲು ಸಿದ್ಧ ಎಂದು ಹೇಳಿಕೊಂಡಿದ್ದಾರೆ.

ಸದ್ಯ 56 ನೇ ವರ್ಷಕ್ಕೆ ಕಾಲಿಟ್ಟಿರುವ ಸಲ್ಮಾನ್ ಖಾನ್ ಇಂದು ಹುಟ್ಟುಹಬ್ಬದ ಸಡಗರದಲ್ಲಿದ್ದಾರೆ. ಹಾಗೂ ಇವರು 'ಟೈಗರ್ 3 ' ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು ನೂರಾರು ಹಿಂದಿ ಭಾಷೆಯ ಸಿನಿಮಾದಲ್ಲಿ ನಟಿಸಿದ್ದಾರೆ

0 Comments

Post a Comment

Post a Comment (0)

Previous Post Next Post