ಡಿಸೆಂಬರ್ 8 ರಂದು ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗಳಿಂದ ಬಳಲುತ್ತಿದ್ದ ಕೆಚ್ಚೆದೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಇಂದು ಬೆಳಿಗ್ಗೆ ( ಡಿ 15) ನಿಧನರಾಗಿದ್ದಾರೆ.
ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಯೋಧ ಜೀವಂತವಾಗಿ ಮರಳಿ ಬರಲಿ ಎಂಬ ಪ್ರಾರ್ಥನೆಗಳು ಫಲಿಸಲಿಲ್ಲ. ಅವರ ಕುಟುಂಬಕ್ಕೆ ಐಎಎಫ್ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದೆ. ಮತ್ತು ಅವರ ಜತೆಗೆ ಇರಲಿದೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.
ಸೇನಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿಯ ಪೈಕಿ 13 ಮಂದಿ ಮೃತಪಟ್ಟಿದ್ದರು. ಈಗ ವರುಣ್ ಸಿಂಗ್ ನಿಧನದೊಂದಿಗೆ ಎಲ್ಲರು ಜೀವವನ್ನೂ ಕಳೆದುಕೊಂಡಂತಾಗಿದೆ.
Post a Comment