ಮಂಗಳೂರು: ಮಂಗಳೂರು ನಗರದ ಹೊರವಲಯದ ಉಳ್ಳಾಲ ವೀರರಾಣೆ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಉಳ್ಳಾಲ ನಗರಸಭೆಯ ಸಹಯೋಗದಲ್ಲಿ ' ವೀರರಾಣಿ ಅಬ್ಬಕ್ಕ ಉತ್ಸವ - 2021 ರಜತ ಸಂಭ್ರಮ' ಕಾರ್ಯಕ್ರಮದ ವೀರರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕಾರಕ್ಕೆ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾಗಿ ನಿವೃತ್ತರಾದ ಚಂದ್ರಕಲಾ ನಂದಾವರ ಅವರು ಆಯ್ಕೆಯಾಗಿದ್ದಾರೆ.
ಡಿಸೆಂಬರ್ 21 ರಂದು ಉಳ್ಳಾಲ ನಗರಸಭೆ ಆವರಣದಲ್ಲಿರುವ ಮಹಾತ್ಮಗಾಂಧಿ ರಂಗಮಂದಿರದಲ್ಲಿ ಅಬ್ಬಕ್ಕ ಉತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ವಿಶೇಷ ಸಾಧನೆಗೈದ, ಸಾಹಿತ್ಯದಲ್ಲಿ ಸೇವೆ ಮಾಡಿದ ಸಾಧಕರಿಂದ " ಅಬ್ಬಕ್ಕ ಪ್ರಶಸ್ತಿ ಪುರಸ್ಕಾರ " ಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಶಿಕ್ಷಣದಲ್ಲಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿ , ಮಂಗಳೂರಿನ ಗಣಪತಿ ಪಿಯು ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಚಂದ್ರಕಲಾ ನಂದಾವರ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
إرسال تعليق