ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ 30 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಚಿಕ್ಕಮಗಳೂರು ನವೋದಯ ವಸತಿ ಶಾಲೆಯಲ್ಲಿ 30 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

 


ಚಿಕ್ಕಮಗಳೂರು:  ಚಿಕ್ಕಮಗಳೂರಿನ ವಸತಿ ಶಾಲೆಯೊಂದರಲ್ಲಿ ಮತ್ತೆ 30 ಜನ ಸೋಂಕಿತರು ಪತ್ತೆಯಾಗಿ, ಆ ಮೂಲಕ ಸೋಂಕಿತರ ಸಂಖ್ಯೆ 70ಕ್ಕೇರಿದೆ.

ಎನ್‌.ಆರ್ ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬಾಳೆಹೊನ್ನೂರು ಸಮೀಪದ ನವೋದಯ ವಿದ್ಯಾಲಯ. ಈಗಾಗಲೇ 40 ಮಂದಿ ವಿದ್ಯಾರ್ಥಿಗಳು ಸೋಂಕಿತರು ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಟೆಸ್ಟ್ ಮಾಡಿದ್ದು ಮತ್ತೆ 30 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.

ಶಾಲೆಯಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸಿಬ್ಬಂದಿ ಸೇರಿ 443 ವಿದ್ಯಾರ್ಥಿಗಳ ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಅದರಲ್ಲಿ 30 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ಮುಂಜಾಗ್ರತ ಕ್ರಮವಾಗಿ ಇದೀಗ ನವೋದಯ ಶಾಲೆಯನ್ನ ಕ್ಲೋಸ್ ಮಾಡಲಾಗಿದೆ. ಕೊರೊನಾ ಇರುವ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم