ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬೈಕ್ ಲೈಟ್ ಕಂಬಕ್ಕೆ ಡಿಕ್ಕಿ ; ಬೈಕ್ ಸವಾರ ಸಾವು

ಬೈಕ್ ಲೈಟ್ ಕಂಬಕ್ಕೆ ಡಿಕ್ಕಿ ; ಬೈಕ್ ಸವಾರ ಸಾವು




 ಉಳ್ಳಾಲ: ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ.


ಮೃತ ಯವವಕನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (22)ಎಂದು ಗುರುತಿಸಲಾಗಿದೆ.

ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ತಿಳಿದುಬಂದಿದೆ.

0 تعليقات

إرسال تعليق

Post a Comment (0)

أحدث أقدم