ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಧನ: ಶಾಸಕ ಭರತ್ ಶೆಟ್ಟಿ ವಿತರಣೆ

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಧನ: ಶಾಸಕ ಭರತ್ ಶೆಟ್ಟಿ ವಿತರಣೆ



ಮಂಗಳೂರು: ಕೊರೊನಾ ವೈರಸ್ ನಿಂದ ಮೃತಪಟ್ಟ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬಿಡುಗಡೆ ಮಾಡಿದ ಪರಿಹಾರ ಧನವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಶುಕ್ರವಾರ ವಿತರಿಸಿದರು.


ಗುರುಪುರದ ನಾಡಕಚೇರಿಯಲ್ಲಿ ಒಟ್ಟು 27 ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ಚೆಕ್ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು ಬಿಪಿಎಲ್ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 50 ಸಾವಿರ ಹಾಗೂ ರಾಜ್ಯ ಸರಕಾರ ಒಂದು ಲಕ್ಷ ರೂಪಾಯಿಯನ್ನು ನೀಡುತ್ತಿದೆ.


ಎಪಿಎಲ್ ಸಂತ್ರಸ್ತ ಕುಟುಂಬದ ಸದಸ್ಯರಿಗೆ ರಾಜ್ಯ ಸರಕಾರ ತಲಾ ಐವತ್ತು ಸಾವಿರ ರೂಪಾಯಿ ನೀಡುತ್ತಿದೆ. ನನ್ನ ಕ್ಷೇತ್ರದ ಕಂದಾಯ ಅಧಿಕಾರಿಗಳಿಂದ ಸಂತ್ರಸ್ತ ಕುಟುಂಬಗಳನ್ನು ಗುರುತಿಸಿ ಅವರಿಗೆ ಪರಿಹಾರ ದೊರಕಿಸುವ ಕಾರ್ಯಕ್ರಮ ನಡೆಯುತ್ತಿದೆ ಎಂದರು. ಇದೇ ಸಂದರ್ಭದಲ್ಲಿ 11 ಫಲಾನುಭವಿಗಳಿಗೆ ಕೇಂದ್ರ ಸರಕಾರದ ಉಜಾಲ ಯೋಜನೆಯಲ್ಲಿ ಗ್ಯಾಸ್ ಸೌಲಭ್ಯಗಳನ್ನು ವಿತರಿಸಲಾಯಿತು.


ಇತ್ತೀಚೆಗೆ ಸುರತ್ಕಲ್ ಹಾಗೂ ಕಾವೂರು ಕಚೇರಿಯಲ್ಲಿ 16 ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ಚೆಕ್ ಅನ್ನು ಶಾಸಕರು ವಿತರಿಸಿರುವುದನ್ನು ಇಲ್ಲಿ ಸ್ಮರಿಸಬಹುದು.


ಈ ಸಂದರ್ಭದಲ್ಲಿ ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಮೂಲ್ಯ, ಉಪ ತಹಶೀಲ್ದಾರ್ ಶಿವಪ್ರಸಾದ್, ಕಂದಾಯ ಅಧಿಕಾರಿಗಳು, ಪಂಚಾಯತ್ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم