ಮಂಗಳವಾರದಂದು ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಫ್ಲಾಟ್ ಫಾರ್ಮ್ ಗಳಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ ದಕ್ಷಿಣ ರೈಲ್ವೆ ಜನರಲ್ ಮ್ಯಾನೇಜರ್ ಜಾನ್ ಥಾಮಸ್ ಸುದ್ದಿಗಾರರೊಂದಿಗೆ ಮಾತನಾಡಿ ಮಾರ್ಚ್ ನೊಳಗೆ ನಿಲ್ದಾಣದಲ್ಲಿ ಪಿಟ್ ಲೈನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಅತ್ತಾವರ ಕಡೆಯಿಂದ ಮಂಗಳೂರು ಕೇಂದ್ರ ನಿಲ್ದಾಣಕ್ಕೆ ಎರಡನೇ ಪ್ರವೇಶ ದ್ವಾರವನ್ನು ಸೇರಿಸಲು ಯಶವಂತಪುರ- ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ಹಗಲು ರೈಲನ್ನು ಕೇಂದ್ರ ನಿಲ್ದಾಣದವರೆಗೆ ವಿಸ್ತರಿಸಬೇಕು ಎಂದು ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಸದಸ್ಯರು ಜಾನ್ ಥಾಮಸ್ ರವರಿಗೆ ಮನವಿ ಸಲ್ಲಿಸಿದರು.
ಮಂಗಳೂರಿನಲ್ಲಿ ಕೇರಳದ ಅನೇಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಅನುಕೂಲವಾಗುತ್ತಿರುವ ಚೆರುವತ್ತೂರು- ಮಂಗಳೂರು ಪ್ಯಾಸೆಂಜರ್ ರೈಲನ್ನು ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿಗಳನ್ನು ಅವಲೋಕಿಸಿ ಮರುಪ್ರಾರಂಭಿಸಲಾಗುವುದು ಎಂದು ಜಾನ್ ಥಾಮಸ್ ಹೇಳಿದರು.
Post a Comment