ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾ ಪತ್ರಕರ್ತರ ಸಮ್ಮೇಳನ ಸಾಧನೆ ಸಂಭ್ರಮ-2021 ಡಿಸೆಂಬರ್ 28ರಂದು ಪೂ. 10 ರಿಂದ ಸಂಜೆ 4:30ರ ತನಕ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಕುರಿತು ಅವರು ಮಾಹಿತಿ ನೀಡಿದರು. ಸಮ್ಮೇಳನವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸುವರು. ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಜಿಲ್ಲಾ ಸಂಘದ ಮೂರು ವರ್ಷಗಳ ಪ್ರಗತಿಯ ವಿವರಗಳನ್ನು ಒಳಗೊಂಡ ವಿಶೇಷ ಸಂಚಿಕೆ 'ಸಾಧನೆ'ಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಬಿಡುಗಡೆ ಮಾಡುವರು. ಸಮ್ಮೇಳನದ ಮೆರವಣಿಗೆಯನ್ನು ಶಾಸಕರಾದ ಡಿ.ವೇದವ್ಯಾಸ ಕಾಮತ್ ಮತ್ತು ಡಾ.ವೈ.ಭರತ್ ಶೆಟ್ಟಿ ಉದ್ಘಾಟಿಸುವರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ವಿದ್ಯಾರ್ಥಿ ಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಿದ್ದಾರೆ. ಮನೋಹರ ಪ್ರಸಾದರ ಕೃತಿ ಭಾವಚಿತ್ರ ಯಾನವನ್ನು ಕರಾವಳಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್ ಬಿಡುಗಡೆಗೊಳಿಸುವರು. ಪತ್ರಿಕಾ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯನ್ನು ಮಂಗಳೂರು ಶಾಸಕ ಯು.ಟಿ.ಖಾದರ್ ನೆರವೇರಿಸುವರು.
ಕುತ್ಲೂರು ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆಯನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ನೆರವೇರಿಸುವರು.
ಹಸಿರು ಉಸಿರು ಕಾರ್ಯಕ್ರಮದ ಉದ್ಘಾಟನೆಯನ್ನು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೆರವೇರಿಸುವರು. ಮಡಪ್ಪಾಡಿ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಖಾತೆ ಸಚಿವ ಎಸ್.ಅಂಗಾರ ನೆರವೇರಿಸುವರು.
ಕಾರ್ಮಿಕ ಇಲಾಖೆಯ ಕಿಟ್ ವಿತರಣೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೆರವೇರಿಸುವರು. ಪುಸ್ತಕ ಪ್ರದರ್ಶನ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ನೆರವೇರಿಸುವರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಏಶ್ಯನ್ ಪತ್ರಕರ್ತರ ಒಕ್ಕೂಟದ ಸಂಚಾಲಕ ಹೆಚ್.ಬಿ. ಮದನ ಗೌಡ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕ್ರೆಡೈ ಮಂಗಳೂರು ಅಧ್ಯಕ್ಷ ಪುಷ್ಪರಾಜ್ ಜೈನ್ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದೆ.
ಸಂಜೆ 4:00ರಿಂದ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ ನಡೆಯಲಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲ್ ಕುಮಾರ್ ಸನ್ಮಾನ ನೆರವೇರಿಸುವರು. ಮಂಗಳೂರು ವಿವಿ ಉಪಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ, ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಣೆ ಹೃಷಿಕೇಶ್ ಭಗವಾನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅದಾನಿ ಯುಪಿಸಿಎಲ್ ಅಧ್ಯಕ್ಷ ಕಿಶೋರ್ ಆಳ್ವ, ಶ್ರೀ ಕೃಷ್ಣ ಡೈರಿ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಪ್ರದೀಪ್ ಪೈ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ರಾಜ್ಯಕಾರ್ಯಕಾರಿ ಸಮಿತಿ ಸದಸ್ಯರು ಜಗನ್ನಾಥ ಶೆಟ್ಟಿ ಬಾಳ, ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment