ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದೇಶಭಕ್ತ ಎನ್.ಎಸ್.ಕಿಲ್ಲೆ-120: ಕರೆಯೋಲೆ ಬಿಡುಗಡೆ

ದೇಶಭಕ್ತ ಎನ್.ಎಸ್.ಕಿಲ್ಲೆ-120: ಕರೆಯೋಲೆ ಬಿಡುಗಡೆ


ಮಂಗಳೂರು: ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂದರ್ಭದಲ್ಲಿ  ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ಭಾಷಣಕಾರ, ಭಾಷಾಂತರಕಾರ, ಯಕ್ಷಗಾನ ಅರ್ಥಧಾರಿ, ಲೇಖಕ ದೇಶಭಕ್ತ ನಾರಾಯಣ ಕಿಲ್ಲೆ ಅವರ 120 ನೇ ಜನ್ಮವರ್ಷಾಚರಣೆ ಹಾಗೂ ಪುತ್ತೂರು ಕಿಲ್ಲೆ ಮೈದಾನದಲ್ಲಿ 2022 ಜನವರಿ 1 ರಂದು ಜರಗುವ ಎನ್.ಎಸ್.ಕಿಲ್ಲೆ ಮಹಾದ್ವಾರ ಲೋಕಾರ್ಪಣೆ ಸಮಾರಂಭದ ಕರೆಯೋಲೆಯನ್ನು ಇತ್ತೀಚಿಗೆ ಮಂಗಳೂರಿನಲ್ಲಿ ಸಾಂಕೇತಿಕವಾಗಿ ಬಿಡುಗಡೆಗೊಳಿಸಲಾಯಿತು.


ಹಿರಿಯ ಸಮಾಜ ಸೇವಕ ಹಾಗೂ ಮಹೇಶ್ ಮೋಟಾರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಕರಪತ್ರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಿಲ್ಲೆ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಕಡಮಜಲು ಸುಭಾಷ್ ರೈ, ಯಕ್ಷಗಾನ ಅರ್ಥಧಾರಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ.ಶೆಟ್ಟಿ, ಕವಿ ಮುದ್ದಣ ಮಿತ್ರ ಮಂಡಳಿಯ ನಂದಳಿಕೆ ಬಾಲಚಂದ್ರ ರಾವ್ ಮತ್ತು ಕಿಲ್ಲೆ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಶಾಂತ ರೈ ಮುಂಡಾಳಗುತ್ತು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post