ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆ 7 ಬಳಿಕ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ ಎಂದು ದ.ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.
ಹೊಸ ವರ್ಷ ಹಿನ್ನೆಲೆಯಲ್ಲಿ ಭಾರೀ ಜನ ಸೇರುವ ಸಾಧ್ಯತೆ ಇದ್ದು ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗೃತಾ ಕ್ರಮವಾಗಿ ಬೀಚ್ ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಹೊಸ ವರ್ಷದ ಆಚರಣೆಯಲ್ಲಿ ಜನರು ಮೈಮರೆತು ಸಂಭ್ರಮಿಸುವುದು ಸಾಮಾನ್ಯವಾಗಿದೆ. ಆದರೆ ಕೋವಿಡ್ ಇರುವ ಸಂದರ್ಭದಲ್ಲಿ ಆಚರಣೆಗಳ ಮೇಲೆ ಲಕ್ಷ್ಯ ವಹಿಸುವುದು ಅನಿವಾರ್ಯ. ಈ ನಿಟ್ಡಿನಲ್ಲಿ ಬೀಚ್ ಗೆ ರಾತ್ರಿ 7 ಗಂಟೆಯ ನಂತರ ತೆರಳುವುದನ್ನು ನಿಷೇಧಿಸಲಾಗಿದೆ ಎನ್ನಬಹುದು.
Post a Comment