ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ್ ಅವರನ್ನು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪರವಾಗಿ ಅವರ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಿ ಸನ್ಮಾನಿಸಿತು.
ಈ ಸಂದರ್ಭ ದಕ್ಷಿಣ ಕನ್ನಡ ಚುಸಾಪ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಮಂಗಳೂರು ಚುಸಾಪ ಹಾಗೂ ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕಾ.ವೀ ಕೃಷ್ಣದಾಸ್, ಉಪಾಧ್ಯಕ್ಷೆ ಅರುಣಾ ನಾಗರಾಜ್, ಮಾಲತಿ ಶೆಟ್ಟಿ ಮಾಣೂರು, ಗೋಪಾಲಕೃಷ್ಣ ಶಾಸ್ತ್ರಿ, ಕೋಶಾಧಿಕಾರಿ ಲತೀಶ್ ಎಂ.ಸಂಕೊಳಿಗೆ, ಜಯಾನಂದ ಪೆರಾಜೆ, ಡಾ.ಸುರೇಶ್ ನೆಗಳಗುಳಿ, ಗೋಪಾಲಕೃಷ್ಣ ಭಟ್ ಕಟ್ಟತ್ತಿಲ, ರೇಖಾ ಸುದೇಶ್ ರಾವ್, ರಶ್ಮಿ ಸನಿಲ್, ಶಾಂತಾ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.
Post a Comment