ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮಂಗಳೂರಿನ ದುಬೈ ಮಾರ್ಕೆಟ್ ನಲ್ಲಿ ಬೆಂಕಿ ಅನಾಹುತ

ಮಂಗಳೂರಿನ ದುಬೈ ಮಾರ್ಕೆಟ್ ನಲ್ಲಿ ಬೆಂಕಿ ಅನಾಹುತ

ಮಂಗಳೂರು: ಬೆಂಕಿ ಅವಘಡ ಸಂಭವಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ ದುಬೈ ಮಾರ್ಕೆಟ್ ನಲ್ಲಿ ಮುಂಜಾನೆ ಬೆಂಕಿ ಆಕಸ್ಮಿಕವಾಗಿ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅನಾಹುತ ಸಂಭವಿಸಿದೆ.ಮಾರ್ಕೆಟ್ ನಲ್ಲಿರುವ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿದೆ.

ಅಗ್ನಿಶಾಮಕ ದಳ ಮತ್ತು ಪೋಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿ ಭಾರೀ ಅನಾಹುತ ತಪ್ಪಿಸಿದ್ದಾರೆ. ಇದರಿಂದಾಗಿ ಯಾವುದೇ ರೀತಿಯ ಪ್ರಾಣಹಾನಿಯಾಗಲಿಲ್ಲ ಎಂದು ಮೂಲದಿಂದ ತಿಳಿದುಬಂದಿದೆ.

0 Comments

Post a Comment

Post a Comment (0)

Previous Post Next Post