ಕೋಲಾರ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ಮಾಜಿ ಸಚಿವ, ಹಿರಿಯ ರಾಜಕಾರಣಿ ಆರ್. ಎಲ್ ಜಾಲಪ್ಪ ಇಂದು ನಿಧನರಾದರು.
ಇವರು ನಾಲ್ಕು ಬಾರಿ ಲೋಕಸಭೆಯ ಸದಸ್ಯರಾಗಿದ್ದರು. ಮತ್ತು ಕೇಂದ್ರ ಸರ್ಕಾರದ ಮಾಜಿ ಮಂತ್ರಿಯೂ ಆಗಿದ್ದರು. ಇವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಸದಸ್ಯರಾಗಿದ್ದರು. ಅಷ್ಟೇ ಅಲ್ಲದೆ ಸದ್ಯ ಶ್ರೀ ದೇವರಾಜ ಅರಸ್ ಮೆಡಿಕಲ್ ಕಾಲೇಜು ಮತ್ತು ಆರ್. ಎಲ್ ಜಾಲಪ್ಪ ಆಸ್ಪತ್ರೆ ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಮನೆಯಲ್ಲಿರುವಾಗ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಜಾಲಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
إرسال تعليق