ಮಂಗಳೂರು: ಡಾ ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ ವತಿಯಿಂದ ನಡೆಯುವ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದ ಮೂವತ್ತೈದನೇ ಕೃತಿ ಉಪ್ಪಿನಂಗಡಿಯ ಕವಯತ್ರಿ, ಲೇಖಕಿ ಸ್ವಪ್ನ ದಿನಕರ್ ಅವರ 'ಹೃದಯದ ಪಿಸುಮಾತು' ಕವನ ಸಂಕಲನ ಬಿಡುಗಡೆ ಸಮಾರಂಭ ಡಿಸೆಂಬರ್ 23ರಂದು ಬೆಳಗ್ಗೆ 10:30ಕ್ಕೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸುವರು. ಹಿರಿಯ ಪತ್ರಕರ್ತ, ಉದಯವಾಣಿಯ ವಿಶ್ರಾಂತ ಸಹಾಯಕ ಸಂಪಾದಕರಾದ ಮನೋಹರ್ ಪ್ರಸಾದ್ ಕೃತಿ ಬಿಡುಗಡೆಗೊಳಿಸುವರು. ಕವಯತ್ರಿ ಲೇಖಕಿ ಸಪ್ನ ದಿನಕರ್ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment