ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಬಳಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾನ್ಸ್ಟೇಬಲ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಿರಣ್ ಪಾಟೀಲ್ ಮೃತ ಕಾನ್ಸ್ಟೇಬಲ್ ಹುಬ್ಬಳ್ಳಿಯ ಸಿಎಆರ್ ಹೆಡ್ಕ್ವಾಟರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಣ್ ಪಾಟೀಲ್, ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment