ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಜ್ಜಿ ನಿಧನ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಜ್ಜಿ ನಿಧನ



ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್​ ಅವರ ಅಜ್ಜಿ ನಿಂಗಮ್ಮ (106) ನಿಧನರಾದರು.

ಶತಾಯುಷಿ ನಿಂಗಮ್ಮ ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಇವರನ್ನು ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶುಕ್ರವಾರ ಮುಂಜಾನೆ ವೇಳೆ ಆಸ್ಪತ್ರೆಯಲ್ಲೇ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ.


0 تعليقات

إرسال تعليق

Post a Comment (0)

أحدث أقدم