ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಕ್ಷಿಣ ಕನ್ನಡದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು

ದಕ್ಷಿಣ ಕನ್ನಡದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು


ಮಂಗಳೂರು: ದಕ್ಷಿಣ ಕನ್ನಡದಲ್ಲಿ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಯವರು ಜಯಗಳಿಸಿದ್ದಾರೆ.

ಈ ಚುನಾವಣೆಯಲ್ಲಿ ಒಟ್ಟು 6,011 ಮತ ಚಲಾವಣೆಯಾಗಿತ್ತು. ಕೋಟ ಶ್ರೀನಿವಾಸ ಪೂಜಾರಿಯವರು ಒಟ್ಟು 3,672  ಮತವನ್ನು ಪಡೆದಿದ್ದಾರೆ. ಮಂಜುನಾಥ ಭಂಡಾರಿ ಒಟ್ಟು 2079 ಮತವನ್ನು ಪಡೆದಿದ್ದಾರೆ. ಹಾಗೆಯೇ ಎಸ್ ಡಿ ಪಿ ಐ ಪಕ್ಷದ ಶಾಫಿ ಕೆ. 204 ಮತ ಪಡೆದಿದ್ದಾರೆ. 

ಈ ಗೆಲುವಿನ ಜೊತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಮುಂದುವರೆಯಲು ಮತ್ತು ಸದನದಲ್ಲಿ ಆಡಳಿತ ಪಕ್ಷದ ನಾಯಕರಾಗಿ ಮುಂದುವರೆಯಲು ಶ್ರೀನಿವಾಸ್ ಪೂಜಾರಿ ಅರ್ಹತೆಯನ್ನು ಪಡೆದಿದ್ದಾರೆ.

0 تعليقات

إرسال تعليق

Post a Comment (0)

أحدث أقدم