ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ನಡೆಯಲಿದೆ. ಹೊರಾಂಗಣದಲ್ಲಿ ಬಂಡಿ ಉತ್ಸವ ಹಾಗೂ ಪಲ್ಲಕ್ಕಿ ಉತ್ಸವ ನಡೆಯಲಿದೆ. ಚಂಪಾ ಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗ ಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಈ ದಿನಗಳಲ್ಲಿ ರಾತ್ರಿ ಪ್ರಾರ್ಥನೆ ಸೇವೆ ಜರಗುವುದಿಲ್ಲ.
ಕೋವಿಡ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವ, ಬೀದಿ ಮಡೆಸ್ನಾನ ಸೇರಿದಂತೆ ಇತರ ಸೇವೆಗಳಿಗೆ ಕೋವಿಡ್ ಮಾರ್ಗಸೂಚಿ ಪಾಲಿಸಿ ನಡೆಸಲು ಜಿಲ್ಲಾಧಿಕಾರಿ ಅವಕಾಶ ಕಲ್ಪಿಸಿದ್ದಾರೆ.
Post a Comment