ನಾಗಮಂಗಲ: ಲಾರಿ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯೊಂದು ತಾಲೂಕಿನ ಚಿಣ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ.
ಪಾಂಡವಪುರ ತಾಲೂಕಿನ ಚಂದ್ರೆ ಗ್ರಾಮದ ರಾಜುಗೌಡರ ಪುತ್ರ ಕಿರಣ್ (23) ಎಂಬಾತನೇ ಅಪಘಾತದಲ್ಲಿ ಸಾವಿಗೀಡಾದ ಯುವಕನಾಗಿದ್ದು, ಅದೇ ಗ್ರಾಮದ ಶ್ರೀಕಾಂತ್ (23) ಹಾಗೂ ಅಪ್ಪು (21) ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿರುವ ಹಿಂಬದಿ ಸವಾರರಾಗಿದ್ದಾರೆ ಎನ್ನಲಾಗಿದೆ.
ಚಂದ್ರೆ ಗ್ರಾಮದಿಂದ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳುವ ಜೀವರ್ಗಿ ಚಾಮರಾಜನಗರ ರಾಜ್ಯ ಹೆದ್ದಾರಿ ಮಧ್ಯದಲ್ಲಿ ಬರುವ ಚಿಣ್ಯ ಬಸ್ ನಿಲ್ದಾಣದಲ್ಲಿ ಚಾಲಕ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸುವ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಗಾಯಾಳುಗಳು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾವಿಗೀಡಾದ ಯುವಕನ ಮೃತದೇಹ ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಶವಾಗಾರದಲ್ಲಿ ಇರಿಸಿದ್ದು, ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment