ಕಡಬ: ಚಿರತೆ ಮರಿಯಂತೆ ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆಯೊಂದು ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕಡಬ ಹಳೇ ಸ್ಟೇಷನ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಚಿರತೆಯನ್ನು ಹೋಲುವ ಪ್ರಾಣಿಯು ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಅಡಿಗೆ ಬಿದ್ದು ಸ್ಥಳದಲ್ಲಿ ಸಾವನ್ನಪ್ಪಿದೆ. ಇದು ಕಾಡು ಬೆಕ್ಕಿನಂತೆಯೂ ಗೋಚರಿಸುತ್ತಿದೆ.
ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment